HomeKarnatakaಎಲ್ಲಾ ಪೆಟ್ರೋಲ್ ಬಂಕ್ ಗಳಿಗೂ ಕಟ್ಟುನಿಟ್ಟಿನ ಮಾರ್ಗಸೂಚಿ ನೀಡಿದ ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆ:...

ಎಲ್ಲಾ ಪೆಟ್ರೋಲ್ ಬಂಕ್ ಗಳಿಗೂ ಕಟ್ಟುನಿಟ್ಟಿನ ಮಾರ್ಗಸೂಚಿ ನೀಡಿದ ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆ: ಇನ್ಮುಂದೆ ಬಾಟಲ್ ಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುವುದು ನಿಷೇಧ

ಬೆಂಗಳೂರು: ಇಂಧನ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿರುವ ಬೆನ್ನಲ್ಲೇ ದೇಶಾದ್ಯಂತ ಭಾರಿ ಚರ್ಚೆಗಳು ನಡೆಯುತ್ತಿವೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಬಿಕ್ಕಟ್ಟಿನ ನಡುವೆ ಇದೀಗ ಇಂಧನ ಕೊರತೆ ಆತಂಕ ಎದುರಾಗಿದ್ದು, ಈ ನಡುವೆ ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆಯು ತೈಲ ಮಾರಾಟಗಾರರಿಗೆ ಕಟ್ಟು ನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ವಿತರಣೆಗೆ ಸಂಬಂಧಿಸಿದಂತೆ ಈ ಮಾರ್ಗಸೂಚಿ ಹೊರಡಿಸಿದ್ದು, ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೆಟ್ರೋಲಿಯಂ ನಿಯಮಗಳು 2002ರ ಅನ್ವಯ, ಇಂಧನ ಕೇಂದ್ರಗಳು ವಾಹನಗಳ ಟ್ಯಾಂಕ್‌ಗಳಿಗೆ ಅಥವಾ ಅಧಿಕೃತ ಕಂಟೇನರ್‌ಗಳಿಗೆ ಮಾತ್ರ ಇಂಧನ ತುಂಬಿಸಬೇಕು. ಇದಕ್ಕೆ ಗರಿಷ್ಠ 200 ಲೀಟರ್‌ಗಳ ಮಿತಿಯನ್ನು ಹೇರಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಕೇವಲ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ಪೂರೈಸಬೇಕು. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಬಾಟಲಿಗಳು, ಕ್ಯಾನ್‌ಗಳು ಅಥವಾ ಇತರ ಯಾವುದೇ ಅನಧಿಕೃತ ಕಂಟೇನರ್‌ಗಳಲ್ಲಿ ಇಂಧನ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಿಟೇಲ್ ಔಟ್‌ಲೆಟ್‌ಗಳು ದೊಡ್ಡ ಮಟ್ಟದ ಇಂಧನ ಪೂರೈಕೆ ಮಾಡುವಂತಿಲ್ಲ. ಅಂತಹ ವ್ಯವಹಾರಗಳನ್ನು ಕೇವಲ ‘ನೇರ ಮಾರಾಟ ಕಾರ್ಯವಿಧಾನ’ಗಳ ಮೂಲಕವೇ ನಡೆಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿ ಬಲ್ಕ್ ಮಾರಾಟ ಮಾಡಿದರೆ ಪರವಾನಗಿ ರದ್ದತಿಯಂತಹ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ.

ಕೃಷಿ ಚಟುವಟಿಕೆಗಳಿಗೆ ಹಾಗೂ ಜಲಚರ ಸಾಕಣೆಗೆ ಅಗತ್ಯವಿರುವ ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಗಮನಹರಿಸಬೇಕು. ರೈತರ ಬೇಡಿಕೆಯನ್ನು ಪರಿಶೀಲಿಸಿ ಸೂಕ್ತವಾಗಿ ಇಂಧನ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ಬಲ್ಕ್ ಕಾರ್ಯಾಚರಣೆಗಳಲ್ಲಿ ಅವ್ಯವಹಾರ ನಡೆದರೆ ಅದು ಸುರಕ್ಷತೆ ಮತ್ತು ಲೈಸೆನ್ಸಿಂಗ್ ನಿಯಮಗಳ ಗಂಭೀರ ಉಲ್ಲಂಘನೆಯಾಗಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular