HomeKarnatakaಕರ್ನಾಟಕ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಅಧಿಸೂಚನೆ

ಕರ್ನಾಟಕ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಉಷಾರಾಣಿ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ಭರತ್ ಕುಮಾರ್ ಮತ್ತು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ವಿ. ಭವಾನಿ ಅವರನ್ನು ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಸೆಪ್ಟೆಂಬರ್ 10ರಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಕೊಲೀಜಿಯಂ ಶಿಫಾರಸು ಮಾಡಿತ್ತು.

ಆ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. ಮೂವರು ಹೊಸ ನ್ಯಾಯಮೂರ್ತಿಗಳ ಸೇರ್ಪಡೆಯಿಂದ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ ಕಲಬುರಗಿ ಮತ್ತು ಧಾರವಾಡ ಪೀಠಗಳಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇನ್ನೂ ಐದು ಹುದ್ದೆಗಳು ಖಾಲಿ ಉಳಿದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿ.ವಿ.ಸಾಗರ ಜಲಾಶಯದಿಂದ ವೇದಾವತಿ ನದಿಗೆ ನೀರು ಬಿಡುಗಡೆ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್‍ ಗಳಿಗೆ 0.25 ಟಿ.ಎಂ.ಸಿ ಪ್ರಮಾಣದ ನೀರನ್ನು ಸಂಗ್ರಹಿಸಲು ವಾಣಿವಿಲಾಸ ಸಾಗರ(ವಿ.ವಿ.ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಇದೇ ಸೆಪ್ಟೆಂಬರ್ 19 ರಿಂದ ನೀರನ್ನು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಸಾರ್ವಜನಿಕರಿಗೆ ವಿಶ್ವೇಶ್ವರಯ್ಯ ಜಲ ನಿಗಮ ಮುನ್ನೆಚ್ಚರಿಕೆ ಸೂಚನೆ ನೀಡಿದೆ.

ಪ್ರಾದೇಶಿಕ ಆಯುಕ್ತರು ಹಾಗೂ ಕಂದಾಯ ಇಲಾಖೆ ಆಯುಕ್ತರ ಆದೇಶದಂತೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ನದಿ, ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ಹಳ್ಳಗಳ ಪಾತ್ರಗಳಲ್ಲಿ ಜನರು ಸಂಚರಿಸುವುದು, ಈಜಾಡುವುದು ಮತ್ತು ಜಾನುವಾರುಗಳನ್ನು ನದಿ ಒಳಗೆ ಬಿಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸೂಚನೆಗಳನ್ನು ಉಲ್ಲಂಘಿಸುವುದು, ಸರ್ಕಾರದ ಆಸ್ತಿಯಾದ ಕಟ್ಟಡಗಳನ್ನು ಹಾನಿಗೊಳಿಸುವುದು ಹಾಗೂ ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯಡಿ ಕಾನೂನು ಬಾಹಿರವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2026–27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಹಾಗೂ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 01 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸ್ವಯಂ ಉದ್ಯೋಗ ಸಾಲ ಯೋಜನೆ,ಮ ಅರಿವು–ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸಕ್ಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2024-25 ಮತ್ತು 2025-26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹೆಚ್.ಸಿ.ಸಾತ್ವಿಕ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular