HomeKarnatakaBig Update: ಬಳ್ಳಾರಿ ವಿಮಾನ ನಿಲ್ದಾಣದ ಕುರಿತು ಬಿಗ್ ಅಪ್‌ಡೇಟ್

Big Update: ಬಳ್ಳಾರಿ ವಿಮಾನ ನಿಲ್ದಾಣದ ಕುರಿತು ಬಿಗ್ ಅಪ್‌ಡೇಟ್

ಬಳ್ಳಾರಿ ವಿಮಾನ ನಿಲ್ದಾಣ ಯೋಜನೆ ಕುರಿತು ಬಿಗ್ ಅಪ್‌ಡೇಟ್ ಸಿಕ್ಕಿದೆ. ಗಂಗಾವತಿ ಶಾಸಕ  ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ವಿಮಾನ ನಿಲ್ದಾಣ ಯೋಜನೆ ಕುರಿತು ಕೇಳಿದ್ದ ಪ್ರಶ್ನೆಗೆ ಸಚಿವ ಎಂ.ಬಿ.ಪಾಟೀಲ್ ಉತ್ತರ ನೀಡಿದ್ದಾರೆ.

ಸಚಿವರು ತಮ್ಮ ಉತ್ತರದಲ್ಲಿ ನೂತನ ಸ್ಥಳವನ್ನು ಗುರುತು ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಯೋಜನೆ ಬಹಳ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ನಗರದಿಂದ ಸುಮಾರು 19 ಕಿ.ಮೀ. ದೂರದಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತಿಸುವ ಮೂಲಕ ಬಳ್ಳಾರಿ, ವಿಜಯನಗರ, ಕೊಪ್ಪಳ ಮೂರು ಜಿಲ್ಲೆಗಳ ಸಂಪರ್ಕ ಹಾಗೂ ಅಭಿವೃದ್ಧಿಗೆ ಹೊಸ ದಿಕ್ಕು ಸಿಗಲಿದೆ. ಇದರಿಂದ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಹೂಡಿಕೆಗಳಿಗೆ ಮಹತ್ವದ ಮೈಲುಗಲ್ಲಾಗಲಿದೆ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ಹೊಸದಾಗಿ ಗುರುತಿಸಿರುವ ಸ್ಥಳದಿಂದ ಹೊಸಪೇಟೆಗೆ 33 ಕಿ.ಮೀ., ಹಂಪಿಗೆ 26 ಕಿ.ಮೀ., ಸಂಡೂರಿಗೆ 33 ಕಿ.ಮೀ., ಕೊಪ್ಪಳಕ್ಕೆ 75 ಕಿ.ಮೀ., ಕುರುಗೋಡಿಗೆ 14 ಕಿ.ಮೀ., ತೋರಣಗಲ್ಲಿಗೆ 13 ಕಿ.ಮೀ. ಹಾಗೂ ಸಿರಗುಪ್ಪಕ್ಕೆ 43 ಕಿ.ಮೀ. ದೂರವಾಗಲಿದೆ ಎಂದು ಸಚಿವರು ವಿವರಣೆ  ನೀಡಿದ್ದಾರೆ.

ಈಗ ಗುರುತಿಸಿರುವ ಜಾಗವು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಷ್ಟರ ಮಟ್ಟಿಗೆ ಸೂಕ್ತವೆಂಬುದನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತೀರ್ಮಾನಿಸಬೇಕಿದೆ. ಇದು ಕಾರ್ಯಸಾಧ್ಯ ಎಂದು ತೀರ್ಮಾನವಾದಲ್ಲಿ ಸಂಬಂಧಿತ ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular