BIG NEWS : ಅನಗತ್ಯ ‘ಸಿಸೇರಿಯನ್ ಹೆರಿಗೆ’ ತಡೆಗೆ ಸರ್ಕಾರದಿಂದ ಹೊಸ ಯೋಜನೆ ಜಾರಿ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ.!

ಬೆಂಗಳೂರು : ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಸರ್ಕಾರದ ಹೊಸ ಯೋಜನೆ ಜಾರಿಗೆ ತರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಮುಂದಿನ ತಿಂಗಳು ನೂತನ ಕಾರ್ಯಕ್ರಮವನ್ನು ಘೋಷಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ ಡಿಕಾಯ್ ಆಪರೇಷನ್ಗಳ ಮೂಲಕ ಭ್ರೂಣ ಹತ್ಯೆ ತಡೆಗೆ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ವರ್ಷ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಬೆಳಗಾವಿಗಳಲ್ಲಿ ಯಶಸ್ವಿ ಡಿಕಾಯ್ ಕಾರ್ಯಾಚರಣೆ ನಡೆಸಲಾಗಿದೆ. ಈವರೆಗೆ ಸುಮಾರು 45 ಮಂದಿಯನ್ನು ಬಂಧಿಸಲಾಗಿದೆ. ಭ್ರೂಣ ಹತ್ಯೆ ಘೋರ ಅಪರಾಧವಾಗಿದ್ದು, ಸರ್ಕಾರ ಇಂತಹ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read