HomeKarnatakaದ್ವಿತೀಯ ಪಿಯುಸಿ ಪರೀಕ್ಷೆಗೆ ಹೊಸ ನಿಯಮ: ಇನ್ನು ಮುಂದೆ ಪಾಸ್ ಆಗಲು ಎರಡು ವರ್ಷ ಮಾತ್ರ...

ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊಸ ನಿಯಮ: ಇನ್ನು ಮುಂದೆ ಪಾಸ್ ಆಗಲು ಎರಡು ವರ್ಷ ಮಾತ್ರ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ ಇನ್ನು ಮುಂದೆ ಎರಡು ವರ್ಷ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಈ ಸಂಬಂಧ ಶಿಕ್ಷಣ ಇಲಾಖೆ ಹೊಸ ನಿಯಮ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವರ್ಷ ಮತ್ತು ಅದರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಮಾತ್ರ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿರುತ್ತದೆ. ಒಂದು ನಿರ್ದಿಷ್ಟ ವರ್ಷದಲ್ಲಿ ನಡೆಯುವ ಮೂರು ವಾರ್ಷಿಕ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳು ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅಥವಾ ಫಲಿತಾಂಶ ಸುಧಾರಣೆಗೆ ಬಯಸಿದಲ್ಲಿ ಕಡ್ಡಾಯವಾಗಿ ಮುಂದಿನ ವರ್ಷವೂ ನಡೆಯುವ ಮೂರು ವಾರ್ಷಿಕ ಪರೀಕ್ಷೆಗಳಲ್ಲಿ ಅದನ್ನು ಪೂರ್ಣಗೊಳಿಸಬೇಕಿದೆ. ಎರಡು ವರ್ಷ ಕಾಲಾವಧಿ ಮೀರಿದ ನಂತರ ಹೆಚ್ಚುವರಿ ಅವಕಾಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದ್ದು, ರೆಗ್ಯುಲರ್, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ. 2024- 25 ನೇ ಸಾಲಿನಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಹೊಸ ನಿಯಮದ ಅನ್ವಯ 2024ರ ದ್ವಿತೀಯ ಪಿಯುಸಿ ಪರೀಕ್ಷೆ ಒಂದು, ಎರಡು ಮತ್ತು ಮೂರಕ್ಕೆ ನೋಂದಾಯಿಸಿಕೊಂಡ ರೆಗ್ಯುಲರ್, ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮುಂದಿನ ವರ್ಷಗಳಿಗೂ ಫಲಿತಾಂಶ ಸುಧಾರಣೆಗೆ ಅವಕಾಶ ನೀಡಲಾಗಿತ್ತು. ಆದರೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಿಸಿಕೊಳ್ಳಲು ಎಷ್ಟು ಬಾರಿ ಪರೀಕ್ಷೆ ಬರೆಯಬಹುದು, ಕಾಲಮಿತಿ ಎಷ್ಟು ಎನ್ನುವ ಬಗ್ಗೆ ನಿಯಮಗಳು ಇರಲಿಲ್ಲ. ಹೊಸ ನಿಯಮದ ಪ್ರಕಾರ ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳಂತೆ ಎರಡು ವರ್ಷದಲ್ಲಿ ಆರು ಬಾರಿ ಪರೀಕ್ಷೆ ಬರೆಯಬಹುದು. ಆದರೆ ನೋಂದಣಿ ಮಾಡಿಸಿಕೊಂಡ ವರ್ಷ ಮತ್ತು ಅದರ ವರ್ಷದೊಳಗೆ ಆರು ಪರೀಕ್ಷೆ ಬರೆಯಬೇಕು. ನಂತರ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular