BIG NEWS : ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ ಹೊಸ ‘ರೂಲ್ಸ್’ ಜಾರಿ : ಉಲ್ಲಂಘಿಸಿದ್ರೆ 7 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ.ದಂಡ.!

ಬೆಂಗಳೂರು :   ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆ ಪ್ರಾಧಿಕಾರದ ಅನುಮತಿ ಪಡೆಯದಿದ್ದರೆ, ಕಾರ್ಯಕ್ರಮದ ಆಯೋಜಕರಿಗೆ ಮೂರು ವರ್ಷದಿಂದ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ, ₹1 ಕೋಟಿವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಡಾ.ಜಿ.ಪರಮೇಶ್ವರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಕಾರ್ಯಕ್ರಮ ಆಯೋಜಕರು ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಏಳು ಸಾವಿರ ಜನರಿಗಿಂತ ಕಡಿಮೆ ಇದ್ದರೆ, ಆ ವ್ಯಾಪ್ತಿಯ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ, ಏಳು ಸಾವಿರಕ್ಕಿಂತ ಹೆಚ್ಚಿದ್ದರೆ ಡಿವೈಎಸ್‌ಪಿ, ಬೆಂಗಳೂರಿನಲ್ಲಿ ಎಸಿಪಿ, 50 ಸಾವಿರಕ್ಕಿಂತ ಹೆಚ್ಚಿದ್ದರೆ ಎಸ್‌ಪಿ ಅಥವಾ ಕಮಿಷನರ್ ಅನುಮತಿ ಪಡೆಯಬೇಕು. ಆಯೋಜಕರು ಕಾರ್ಯಕ್ರಮಕ್ಕೆ 10 ದಿನ ಮೊದಲು ಸಿದ್ಧತೆ, ನಡೆಯುವ ಜಾಗ ಸೇರಿದಂತೆ ಸಂಪೂರ್ಣ ಮಾಹಿತಿ ನೀಡಬೇಕು. ಖಾಸಗಿ ಹಾಗೂ ಸಾರ್ವಜನಿಕ ಸ್ವತ್ತಿಗೆ ಹಾನಿಯಾಗದ ರೀತಿ ಕ್ರಮ ಕೈಗೊಳ್ಳುವ ಜವಾಬ್ದಾರಿ ಹೊರಬೇಕು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ, ಆಸ್ತಿ ನಷ್ಟ, ಶಾಂತಿಭಂಗಕ್ಕೆ ಪ್ರಚೋದಿಸಿದರೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು, ₹50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಪೊಲೀಸರ ನಿರ್ದೇಶನ ಉಲ್ಲಂಘಿಸಿದರೆ ಒಂದು ತಿಂಗಳ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗುವುದು. ಜೊತೆಗೆ ಸ್ವತ್ತಿಗೆ ಉಂಟಾದ ನಷ್ಟವನ್ನು ಆಯೋಜಕರು ಭರಿಸಬೇಕು. ಜೀವಹಾನಿ ಜವಾಬ್ದಾರಿಯನ್ನೂ ಹೊರಬೇಕು. 50 ಸಾವಿರ ಜನರಿಗಿಂತ ಹೆಚ್ಚಿದ್ದಾಗ ₹1 ಕೋಟಿ ಮೊತ್ತದ ನಷ್ಟ ಭರ್ತಿ ಬಾಂಡ್ ನೀಡಬೇಕು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read