ಬೆಂಗಳೂರು: ಹೊಸ ಸಾಫ್ಟ್ ವೇರ್ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಎರಡು ದಿನಗಳಿಂದ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತಗೊಂಡಿದೆ.
ಹೊಸ ಸಾಫ್ಟ್ವೇರ್ ಅಳವಡಿಸಿದ ನಂತರ ಸಮಸ್ಯೆ ಉಂಟಾಗಿದೆ. ತುರ್ತು ಸ್ಪೀಡ್ ಪೋಸ್ಟ್ ಸೌಲಭ್ಯ ಸಿಗದೇ ಗ್ರಾಹಕರಿಗೆ ತೊಂದರೆಯಾಗಿದೆ. ಅಂಚೆ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಇನ್ಫೋಸಿಸ್ ಸಾಫ್ಟ್ ವೇರ್ ಬಳಕೆ ಮಾಡಲಾಗುತ್ತಿದ್ದು, ಇದೀಗ ಅಂಚೆ ಇಲಾಖೆ ಸ್ವತಃ ತನ್ನದೇ 2.0 ಸಾಫ್ಟ್ ವೇರ್ ಅಭಿವೃದ್ಧಿಪಡಿಸಿದ್ದು, ಜೂನ್ ಕೊನೆಯ ವಾರದಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ತಾಂತ್ರಿಕ ಸಮಸ್ಯೆ ಉಂಟಾಗಿದೆ.
ಏಕಾಏಕಿ ಸಾಫ್ಟ್ವೇರ್ ಕೈಕೊಟ್ಟಿದ್ದು, ತಾಂತ್ರಿಕ ತೊಂದರೆಯ ಕಾರಣ ರಾಜ್ಯಾದ್ಯಂತ ಎರಡು ದಿನಗಳಿಂದ ಸ್ಪೀಡ್ ಪೋಸ್ಟ್ ಸೇವೆ ಸಾಧ್ಯವಾಗಿಲ್ಲ. ಇದರಿಂದಾಗಿ ಗ್ರಾಹಕರಿಗೆ ತೊಂದರೆಯಾಗಿದೆ. ಇನ್ನು ಸಾಫ್ಟ್ ವೇರ್ ತಾಂತ್ರಿಕ ಸಮಸ್ಯೆಯ ಕಾರಣ ಅಂಚೆ ಇಲಾಖೆಯಲ್ಲಿ ಅನೇಕ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸೋಮವಾರದೊಳಗೆ ಸಮಸ್ಯೆ ಬಗೆಹರಿಸಲು ಅಂಚೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.