HomeTourismಕೊಡಗು ಪ್ರವಾಸಿಗರಿಗೆ ಹೊಸ ಆಕರ್ಷಣೆ: ರಾಜಾಸೀಟು ಉದ್ಯಾನದಲ್ಲಿ ಇನ್ನಷ್ಟು ಸೌಲಭ್ಯ

ಕೊಡಗು ಪ್ರವಾಸಿಗರಿಗೆ ಹೊಸ ಆಕರ್ಷಣೆ: ರಾಜಾಸೀಟು ಉದ್ಯಾನದಲ್ಲಿ ಇನ್ನಷ್ಟು ಸೌಲಭ್ಯ

ಮಡಿಕೇರಿ, ಕೊಡಗು ಜಿಲ್ಲೆಯ ಪ್ರವಾಸಿಗರ ಕೇಂದ್ರ ಬಿಂದುವಾದ ರಾಜಾಸೀಟು ಉದ್ಯಾನವನಕ್ಕೆ ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರೇಟರ್ ರಾಜಾಸೀಟು, ಪುಟಾಣಿ ರೈಲು ಮಾರ್ಗ ಮತ್ತು ಕೂರ್ಗ್ ವಿಲೇಜ್‍ಗೆ ತೆರಳಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.  ರಾಜಸೀಟು ಉದ್ಯಾನವನ ಬಳಿಯ ಟಿಕೆಟ್ ಕೌಂಟರ್, ಮಾಹಿತಿ ಕೇಂದ್ರ ಹಾಗೂ ಉದ್ಯಾನವನದೊಳಗೆ ಸಿಸಿಟಿವಿ ಹಾಗೂ ಗೇಟ್‌ಗಳನ್ನು ಪರಿಶೀಲಿಸಿದರು.

ಉದ್ಯಾನವನ ಸುತ್ತಲೂ ಸಿಸಿಟಿವಿ ವೈರ್ ಹಾಗೂ ವಿದ್ಯುತ್ ತಂತಿಗಳಿಂದ ಕೂಡಿದ್ದು, ಉದ್ಯಾನವನದ ಸೌಂದರ್ಯ ಹಾಳಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ದುರಸ್ತಿ ಕಾರ್ಯ ಹಾಗೂ ಭೂಮಿಯ ಒಳಭಾಗದಲ್ಲಿ ತಂತಿ ಅಳವಡಿಸುವುದು ಹಾಗೂ ದೀಪಗಳನ್ನು ದುರಸ್ತಿಪಡಿಸಿ ಅಲಂಕಾರಿಕಾ ದೀಪಗಳನ್ನು ಅಳವಡಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೋಟಗಾರಿಕೆ ಉಪ ನಿರ್ದೇಶಕರ ಜೊತೆ ಜಿಲ್ಲಾಧಿಕಾರಿಗಳು ಮಾತನಾಡಿ ಸೂಕ್ತ ನಿರ್ದೇಶನಗಳನ್ನು ನೀಡಿದರು. ಪ್ರವಾಸಿಗರ ಆಕರ್ಷಣೀಯ ಕೇಂದ್ರವಾದ ರಾಜಾಸೀಟು ಬಳಿಯಲ್ಲಿ ಪುಟಾಣಿ ರೈಲು ಆರಂಭಕ್ಕೆ ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಿದರು.

ಕೂರ್ಗ್ ವಿಲೇಜ್‌ನಲ್ಲಿರುವ ಮಳಿಗೆ ವೀಕ್ಷಿಸಿದ ಡಿಸಿ ಈ ಮಳಿಗೆ ಪ್ರದೇಶದಲ್ಲಿ ಮಾವು ಮೇಳ, ಫಲಪುಷ್ಪ ಪ್ರದರ್ಶನ ಮತ್ತು ಇತರೆ ಇಲಾಖೆಗಳಲ್ಲಿ ನಡೆಸುವ ಮೇಳಗಳನ್ನು ಆಯೋಜಿಸಲು ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮವಹಿಸಬೇಕು ಎಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ರಾಜಾಸೀಟು ಉದ್ಯಾನವನ ಅಭಿವೃದ್ಧಿ, ಗ್ರೇಟರ್ ರಾಜಾಸೀಟು ಬೆಳವಣಿಗೆ ಹಾಗೆಯೇ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಇತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular