HomeTourismಹೊಸ ವರ್ಷಾಚರಣೆ: ಚಿಕ್ಕಮಗಳೂರು ಪ್ರವಾಸಿಗರ ಗಮನಕ್ಕೆ

ಹೊಸ ವರ್ಷಾಚರಣೆ: ಚಿಕ್ಕಮಗಳೂರು ಪ್ರವಾಸಿಗರ ಗಮನಕ್ಕೆ

ಹೊಸ ವರ್ಷಾಚರಣೆಗೆಗಾಗಿ ಸಾವಿರಾರು ಜನರು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕಡೆ ಪ್ರವಾಸ ಹೋಗುತ್ತಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಸೂಚನೆಗಳು ಏನು? ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್ಪಿ ಡಾ. ವಿಕ್ರಮ ಅಮಟೆ ಸಭೆಯನ್ನು ನಡೆಸಿದರು. ಕಡ್ಡಾಯವಾಗಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ಕೊಟ್ಟಿದ್ದಾರೆ.

ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಯಾವುದೇ ಅಹಿತಕರ ಆಗುಹೋಗುಗಳಿಗೆ ಆಸ್ಪದ ಆಗದ ರೀತಿಯಲ್ಲಿ ಆಚರಿಸಲು ಚಿಕ್ಕಮಗಳೂರು ಜಿಲ್ಲಾ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರವಾಸಿಗರಿಗೆ ಸೂಚನೆಗಳು

  • ವಾಹನ ಚಾಲನೆಯ ಸಂದರ್ಭದಲ್ಲಿ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು.
  • ನಗರ ಪಟ್ಟಣಗಳ ವ್ಯಾಪ್ತಿ ಪ್ರದೇಶದಲ್ಲಿ ಹಾಗೂ ಹೊರವಲಯಗಳಲ್ಲಿ ವೀಲ್ಹಿಂಗ್ ಮಾಡುವುದು, ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸಬಾರದು.
  • ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಿಶೇಷವಾಗಿ ಕುಡಿದು ವಾಹನ ಚಲಾಯಿಸುವುದು, ವೀಲ್ಹಿಂಗ್ ಮಾಡುವವರ ವಿರುದ್ಧ ವಿಶೇಷ ಅಭಿಯಾನದಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಈ ಸಂಬಂಧ ಎಚ್ಚರ ವಹಿಸುವುದು.
  • ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯನ್ನು ಆಚರಿಸಲು ಅವಕಾಶವಿರುವುದಿಲ್ಲ. ಆದ್ದರಿಂದ ನಿಮ್ಮ ನಿಮ್ಮ ಮನೆಗಳಲ್ಲಿ ಅಥವಾ ಕಾರ್ಯಕ್ರಮದ ನಿಗದಿತ ಸ್ಥಳಗಳಲ್ಲಿ ಆಚರಿಸುವುದು ಸೂಕ್ತವಾಗಿರುತ್ತದೆ.
  • ಸಂಚಾರ ನಿಯಂತ್ರಣದ ಸಲುವಾಗಿ ಜಿಲ್ಲಾ ಪೊಲೀಸ್ ವತಿಯಿಂದ ಬ್ಯಾರಿಕೆಡಿಂಗ್ ವ್ಯವಸ್ಥೆ ಮಾಡಿದ್ದು, ನಿಧಾನಗತಿಯ ವಾಹನ ಚಾಲನೆ ಇರುವುದರಿಂದ ಸಾರ್ವಜನಿಕರು ಸಹಕರಿಸುವುದು.
  • ಘನ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳ ಅನುಸಾರ ಧ್ವನಿವರ್ಧಕಗಳನ್ನು ಬಳಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಮ್ಯೂಸಿಕ್ ಸಿಸ್ಟಮ್ ಬಳಸಲು ಅವಕಾಶವಿರುವುದಿಲ್ಲ.
  • ಜಿಲ್ಲೆಯಾದ್ಯಂತ ಪೊಲೀಸರು ನಗರ, ಪಟ್ಟಣ ಪ್ರದೇಶ ಹಾಗೂ ಹೊರವಲಯಗಳಲ್ಲಿ ಪೆಟ್ರೋಲಿಂಗ್/ ಫಿಕೆಟಿಂಗ್ ಕರ್ತವ್ಯದಲ್ಲಿದ್ದು, ನೀತಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
  • ದಿನಾಂಕ 31.12.2025 ರ ಸಂಜೆ 6 ಗಂಟೆಯಿಂದ ದಿನಾಂಕ 1.1.2026 ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಪ್ರವಾಸಿಗರಿಂದ ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಈ ಸಂಬಂಧ ಆದೇಶ ಹೊರಡಿಸಲಾಗುವುದು.
  • ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವುದೇ ವ್ಯಕ್ತಿಗಳಿಂದ ಅಥವಾ ಸಂಘಟನೆಗಳಿಂದ ಗಲಾಟೆ ಅಥವಾ ಅಹಿತಕರ ಸನ್ನಿವೇಶಗಳು ಉಂಟಾದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ, ಹಿರಿಯ ಅಧಿಕಾರಿಗಳಿಗೆ ಅಥವಾ ಜಿಲ್ಲಾ ನಿಯಂತ್ರಣ ಕೊಠಡಿ 9480805100 ಸಂಖ್ಯೆಗೆ ಕರೆ ಅಥವಾ ವಾಟ್ಸಪ್ ಮಾಡಿ ಮಾಹಿತಿ ನೀಡುವುದು.
  • ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಅನ್ವಯ ರಾತ್ರಿ 10:00 ಗಂಟೆಯಿಂದ ಬೆಳಗ್ಗೆ 6 ವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಹಾಗೂ ಯಾವುದೇ ಮಾಲಿನ್ಯಕಾರಕ ಪಟಾಕಿಗಳನ್ನು ಸಿಡಿಸಬಾರದು.
  • ಹೋಂ ಸ್ಟೇ ರೆಸಾರ್ಟ್ ಮಾಲೀಕರು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಆಗಮಿಸುವ ಅತಿಥಿಗಳಿಗೆ ಸೂಕ್ತವಾದ ರಸ್ತೆ ಮತ್ತು ಉತ್ತಮ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು ಆದ್ಯ ಜವಾಬ್ದಾರಿಯಾಗಿರುತ್ತದೆ.
  • ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದು ಪ್ರವಾಸಿಗರು ನಿರ್ಬಂಧಿತ ಸ್ಥಳಗಳಿಗೆ ತೆರಳದಂತೆ ಜಾಗೃತಿ ವಹಿಸುವುದು.
  • ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ/ ವಸ್ತುಗಳ ಬಳಕೆ ನಿಷೇಧವಿದ್ದು ಬಳಕೆ ಎಲ್ಲಿಯಾದರೂ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಈ ಸಂಬಂಧ ಯಾವುದೇ ಮಾಹಿತಿ ಕಂಡು ಬಂದಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಹಾಗೂ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವುದು.
  • ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಆಗಮಿಸುವ ಅತಿಥಿಗಳ ಹೆಸರು, ವಿಳಾಸ, ಸಮಯ ಗುರುತಿನ ಚೀಟಿ ವಾಹನ ಚಾಲನಾ ಪರವಾನಿಗೆ ಇತ್ಯಾದಿ ಸಂಪೂರ್ಣ ವಿವರಗಳನ್ನು ಕಲೆ ಹಾಕುವಂತೆ ಹಾಗೂ ಸದರಿ ಮಾಹಿತಿಯನ್ನು ರಿಜಿಸ್ಟರ್ ಮತ್ತು ಗಣಕೀಕರಣ ಮಾಡಿ ನಿರ್ವಹಣೆ ಮಾಡುವುದು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular