HomeLatest NewsBREAKING: ಹೊಸ ವರ್ಷಾಚರಣೆ ಹಿನ್ನಲೆ: ಬೆಂಗಳೂರು ಪೊಲೀಸರಿಂದ 'ಆಪರೇಷನ್ ಪಬ್' ಶುರು

BREAKING: ಹೊಸ ವರ್ಷಾಚರಣೆ ಹಿನ್ನಲೆ: ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು

ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈಗಿನಿಂದಲೇ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಎಲ್ಲೆಡೆ ಆಪರೇಷನ್ ಪಬ್ ಆರಂಭಿಸಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ.

ಗೋವಾದಲ್ಲಿ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಸಂಭವಿಸಿ 25 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿಯೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಈ ನಿಟ್ಟಿನಲ್ಲಿ ನಗರದ ಎಲ್ಲಾ ಪಬ್ ಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.

ನಿನ್ನೆ ತಡರಾತ್ರಿವರೆಗೂ ಬೆಂಗಳೂರು ಪೊಲೀಸರು ವಿವಿಧ ಪಬ್ ಗಳಿಗೆ ಭೇಟಿ ನೀಡಿ ಹೊಸ ವರ್ಷಾಚರಣೆಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ, ಅವಘಡಗಳು ನಡೆಯದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲನೆ ಜೊತೆಗೆ ಕ್ರಮಗಳ ಬಗ್ಗೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯಲ್ಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ ಹಾಗೂ ಗೋವಾದಲ್ಲಿ ನಡೆದ ಬೆಂಕಿ ದುರಂತಗಳ ಹಿನ್ನೆಲೆಯಲ್ಲಿ ಈ ಬಾರಿಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಬೆಂಗಳೂರು ಪೊಲೀಸರು ವಾಹನಗಳು, ಪಬ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular