HomeKarnatakaಬೆಂಗಳೂರಲ್ಲಿ ಹೊಸ ವರ್ಷಾಚರಣೆ: ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು

ಬೆಂಗಳೂರಲ್ಲಿ ಹೊಸ ವರ್ಷಾಚರಣೆ: ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು

ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಜನರ ಸುರಕ್ಷತೆ ದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ 20,000 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಕೊಟ್ಟ ಸೂಚನೆಗಳು

  • ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.
  • ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.
  • ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.
  • ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.
  • ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ.
  • ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.
  • ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು.
  • ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular