ಚಿಕ್ಕಬಳ್ಳಾಪುರ: ಹಾಲು ಉತ್ಪಾದಕ ರೈತರಿಗೆ ಹೊಸ ವರ್ಷದ ಉಡುಗೊರೆಯಾಗಿ ಹಾಲಿನ ಖರೀದಿ ದರವನ್ನು ಒಂದು ರೂ. ಹೆಚ್ಚಳ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದಿಂದ ಜಿಲ್ಲೆಯ ಹಾಲು ಉತ್ಪಾದಕರ ರೈತರಿಗೆ ಪ್ರತಿ ಲೀಟರ್ ಗೆ ಒಂದು ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಹೊಸ ವರ್ಷದ ಕೊಡುಗೆಯಾಗಿ ಪ್ರತಿ ಲೀಟರ್ ಹಾಲಿನ ಮೇಲೆ ರೈತರಿಗೆ ಒಂದು ರೂಪಾಯಿ ಹೆಚ್ಚುವರಿ ಸಿಗಲಿದೆ.
ಇಷ್ಟು ದಿನ ಲೀಟರ್ ಗೆ 35.40 ರೂ. ಇದ್ದು ಒಂದು ರೂ. ಹೆಚ್ಚಳದಿಂದ 36.40 ರೂ. ಆಗಲಿದೆ. ಪ್ರತಿ ಲೀಟರ್ ಗೆ ಸರ್ಕಾರದಿಂದ ಐದು ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಪ್ರತಿ ಲೀಟರ್ ಗೆ 41.40 ರೂ. ಸಿಗಲಿದೆ.
ಸಚಿವ ಡಾ.ಎಂ.ಸಿ. ಸುಧಾಕರ್ ಸೂಚನೆ ಮೇರೆಗೆ ಹಾಲು ಉತ್ಪಾದನೆ ಹೆಚ್ಚಳ ಉದ್ದೇಶದಿಂದ ಚಿಮುಲ್ ಆಡಳಿತಾಧಿಕಾರಿ ಅಶ್ವಿನ್ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಮುಂದಿನ ಮೂರು ತಿಂಗಳ ಅವಧಿಗೆ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ನೀಡಲು ಲೀಟರ್ ಗೆ ಒಂದು ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರಿಂದ 4.5 ಕೋಟಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ.

