HomeLatest Newsಆಸ್ಪತ್ರೆ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ...!

ಆಸ್ಪತ್ರೆ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ…!

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸರ್ಕಾರಿ ಆಸ್ಪತ್ರೆ ಶೌಚಾಲಯದ ಬಕೆಟ್ ನಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ಶಿಶುವನ್ನು ರಕ್ಷಣೆ ಮಾಡಿದ್ದಾರೆ.

ಆಗ ತಾನೇ ಜನಿಸಿದ ನವಜಾತ ಶಿಶುವನ್ನು ಯಾರೋ ಬಟ್ಟೆಯಲ್ಲಿ ಸುತ್ತಿ ಶೌಚಾಲಯದ ಬಕೆಟ್ ನಲ್ಲಿ ಹಾಕಿ ಹೋಗಿದ್ದಾರೆ. ಮಗು ಅಳುವ ಶಬ್ದ ಕೇಳಿದ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವೈದ್ಯರು ಮತ್ತು ಇತರೆ ಸಿಬ್ಬಂದಿ ಸ್ಥಳಕ್ಕೆ ಬಂದು ನೋಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ದಾವಣಗೆರೆ ಮಕ್ಕಳ ಆರೈಕೆ ಕೇಂದ್ರಕ್ಕೆ ಶಿಶುವನ್ನು ನೀಡಲಾಗುವುದು. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular