ಬೆಂಗಳೂರು: ತೋಟವೊಂದರಲ್ಲಿ ಬಟ್ಟೆಯಲ್ಲಿ ಸುತ್ತಿಡಲಾಗಿದ್ದ ನವಜಾತ ಗಂಡು ಶಿಶು ಪತ್ತೆಯಾಗಿದೆ. ಬುಡುವನಹಳ್ಳಿಯ ತೋಟದಲ್ಲಿ ಶುಕ್ರವಾರ ಮಧ್ಯಾಹ್ನ ಶಿಶು ಪತ್ತೆಯಾಗಿದೆ.
ಸಮೀಪದ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರು ಮಗು ಅಳುವ ಶಬ್ದ ಕೇಳಿಸಿ ಹುಡುಕಾಡಿದ್ದಾರೆ. ಅಳು ಕೇಳಿ ಬಂದ ಸ್ಥಳಕ್ಕೆ ಬಂದು ನೋಡಿದಾಗ ಬಟ್ಟೆಯಲ್ಲಿ ಸುತ್ತಿಟ್ಟ ನವಜಾತ ಶಿಶು ಬಿಟ್ಟು ಹೋಗಿರುವುದು ಕಂಡು ಬಂದಿದೆ. ಮಗುವನ್ನು ರಕ್ಷಿಸಿದ ರೈತರು ರಾಜಾನುಕುಂಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವನ್ನು ಆರೈಕೆ ಮಾಡಿ ಚಿಕಿತ್ಸೆ ನೀಡಲಾಗಿದೆ. ಮಗುವಿನ ಪೋಷಕರು ಯಾರು? ತೋಟದಲ್ಲಿ ಶಿಶುವನ್ನು ಬಿಟ್ಟು ಹೋದವರು ಯಾರು ಎನ್ನುವುದರ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

