ಕೊಪ್ಪಳ: ದೇವಸ್ಥಾನದ ಪಕ್ಕದ ಪೊಡೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನದ ಬಳಿ ನಡೆದಿದೆ.
ದೇವಸ್ಥಾನದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಮಗುವನ್ನು ಎಸೆದು ಹೋಗಿರುವ ಶಂಕೆ ಇದೆ ಎಂದು ಸಾರ್ವಜನಿಕರು ಹೇಳಿದ್ದಾರೆ.
ಪೊದೆಯ ಬಳಿ ಮಗು ಅಳುವಿನ ಶಬ್ಧ ಕೇಳಿದ ಸ್ಥಳೀಯರು ಸ್ಥಳಕ್ಕೆ ಬಂದು ನೋಡಿದಾಗ ನವಜಾತ ಮಗು ಪತ್ತೆಯಾಗಿದೆ. ತಕ್ಷಣ ಮಗುವನ್ನು ಎತ್ತಿಕೊಂಡು ಆರೈಕೆ ಮಾಡಿದ್ದಾರೆ. ಮುಳ್ಳಿನ ಪೊದೆ, ಕೀಟಗಳಿಂದಾಗಿ ಮಗುವಿಗೆ ಗಾಯಗಳಾಗಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಗು ಸದ್ಯ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿದ್ದು, ಆರೈಕೆ ಮಾಡಲಾಗುತ್ತಿದೆ. ಮಗುವಿನ ಪೋಷಕರ ಪತ್ತೆಗಾಗು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

