ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾಲಿ ಇಲ್ಲ, ಖಾಲಿ ಆಗುವುದಿಲ್ಲ ಎಂದು ಕೊಪ್ಪಳದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ರಾಜ್ಯದಲ್ಲಿ ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಕುರಿತಂತೆ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿ ಆಗಲಿ. ನಾನೂ ಮುಖ್ಯಮಂತ್ರಿಯಾಗುವೆ. ನಾನೇನು ಕಮ್ಮಿನಾ? ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆದರೆ ತಪ್ಪೇನು? ಅದರಲ್ಲಿ ತಪ್ಪೇನಿದೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ಅಭ್ಯರ್ಥಿ. ರಾಹುಲ್ ಗಾಂಧಿ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿ ಆಗಲಿ. ಯಾರು ಪ್ರಧಾನಿ ಆಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಬೇರೆ ಯಾರನ್ನಾದರೂ ಪ್ರಧಾನಿ ಮಾಡಿದರೆ ಖರ್ಗೆ ಆಗಲಿ. ದೇಶದಲ್ಲಿ ಮುಂದಿನ ಬಾರಿ ನಮ್ಮವರೇ ಪ್ರಧಾನಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ.
ನವೆಂಬರ್ ಕ್ರಾಂತಿಯ ಬಗ್ಗೆ ಓದಿಲ್ಲ. ನವೆಂಬರ್ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು. ಸಂಪುಟ ಪುನರ್ ರಚನೆಯ ವೇಳೆ ಹೊಸಬರಿಗೆ ಸ್ಥಾನ ಸಿಗಲಿದೆ. ಎರಡೂವರೆ ವರ್ಷ ಹೊಸಬರಿಗೆ ಅವಕಾಶ ಸಿಕ್ಕರೆ ತಪ್ಪೇನಿಲ್ಲ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ನನ್ನ ವಿರೋಧವಿಲ್ಲ. ಸದ್ಯ ಈ ವಿಚಾರದ ಬಗ್ಗೆ ಮಾತನಾಡಿದರೆ ನೋಟಿಸ್ ಕೊಡುತ್ತಾರೆ ಎಂದು ಹೇಳಿದ್ದಾರೆ.