HomeKarnatakaBIG NEWS: ನವವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ವಿರೋಧಿಸಿದ್ದಕ್ಕೆ ಚಾಕು ಇರಿದು ದುಷ್ಕರ್ಮಿ ಪರಾರಿ

BIG NEWS: ನವವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ವಿರೋಧಿಸಿದ್ದಕ್ಕೆ ಚಾಕು ಇರಿದು ದುಷ್ಕರ್ಮಿ ಪರಾರಿ

ದಾವಣಗೆರೆ: ನವವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ದುಷ್ಕರ್ಮಿ, ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿ ಚಾಕು ಇರಿದ ದುಷ್ಕರ್ಮಿ.

ಕಾಟಪ್ಪ ಮಹಿಳೆಗೆ ಚಾಕು ಇರಿದು ಪರಾರಿಯಾಗುತ್ತಿದ್ದ ಈ ವೇಳೆ ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗೆ ವಿವಾಹವಾಗಿದ್ದ ಮಹಿಳೆ ಎರಡು ದಿನಗಳ ಹಿಂದಷ್ಟೇ ದಾವಣಗೆರೆಯಲ್ಲಿನ ತವರು ಮನೆಗೆ ಬಂದಿದ್ದಳು. ಪಕ್ಕದ ಮನೆಯವನೇ ಆದ ಕಾಟಪ್ಪ ಏಕಾಏಕಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಿ ಮಹಿಳೆ ಕಿರುಚಾಡುತ್ತಿದ್ದಂತೆ ಚಾಕುವಿನಿಂದ ಇರಿದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆ ಚೀರಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದಿದ್ದಾರೆ. ಜನರು ಬರುತ್ತಿರುವುದನ್ನು ಕಂಡು ಆರೋಪಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular