ಬೆಳಗಾವಿ: ಮದುವೆಯಾದ ಐದೇ ತಿಂಗಳಿಗೆ ಕ್ರಿಮಿನಾಶಕ ಸೇವಿಸಿ ನವವಿವಾಹಿತೆ ಸಾವು ಕಂಡಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ಘಟನೆ ನಡೆದಿದೆ.
ಇಂಚಲ ಗ್ರಾಮದ ಲಕ್ಷ್ಮಿ ಮಂಜುನಾಥ ಹೂಗಾರ(22) ಮೃತಪಟ್ಟವರು ಎಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಿ ಅವರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಿಸೆಂಬರ್ 7ರಂದು ಲಕ್ಷ್ಮಿ ಮಂಜುನಾಥ ಹೂಗಾರ ಮದುವೆಯಾಗಿತ್ತು. ಲಕ್ಷ್ಮಿ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.