ಶಿವಮೊಗ್ಗ : ಮದುವೆಯಾದ ಆರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಲತಾ ಎಂಬ ಮಹಿಳೆ ಭದ್ರಾ ಬಲದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿ ಲತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
2025 ಏಪ್ರಿಲ್ ತಿಂಗಳಿನಲ್ಲಿ ಶಿಕಾರಿಪುರದ ಗುರುರಾಜ್ ಜೊತೆ ಲತಾ ಮದುವೆಯಾಗಿದ್ದರು. ಲತಾ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು. ಪತಿ ಹಾಗೂ ಮನೆಯವರ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಪತಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಕಿರುಕುಳ ಆರೋಪ ಹೊರಿಸಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
