ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ದಿನವೇ ತವರಿಗೆ ಹೋಗುತ್ತಿದ್ದ ನವವಿವಾಹಿತ ಮಹಿಳೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.
ಮೃತರನ್ನು 23 ವರ್ಷದ ಗೀತಾ ಎಂದು ಗುರುತಿಸಲಾಗಿದೆ. ಪತಿ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ . ತಲೆಗೆ ವಿಪರೀತ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾಳೆ.
ಅಮ್ಮನ ಮನೆಗೆ ಪತಿ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಪತ್ನಿಯ ದೇಹವನ್ನು ತೊಡೆಮೇಲೆ ಇರಿಸಿಕೊಂಡು ಪತಿ ಸುನಿಲ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ಘಟನೆಯಿಂದ ನೆರೆದಿದ್ದ ಸ್ಥಳೀಯರು ಮಮ್ಮುಲ ಮರುಗಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.