HomeIndiaಸುತ್ತುವರಿದ ಕೋತಿಗಳ ಹಿಂಡು: ಗಾಬರಿಯಾಗಿ ತಪ್ಪಿಸಿಕೊಳ್ಳಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದು ನವವಿವಾಹಿತೆ ದುರ್ಮರಣ

ಸುತ್ತುವರಿದ ಕೋತಿಗಳ ಹಿಂಡು: ಗಾಬರಿಯಾಗಿ ತಪ್ಪಿಸಿಕೊಳ್ಳಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದು ನವವಿವಾಹಿತೆ ದುರ್ಮರಣ

ಚೆನ್ನೈ: ಕೋತಿಗಳ ಹಿಂಡು ಏಕಾಎಕಿ ಸುತ್ತುವರೆದಿದ್ದರಿಂದ ಗಾಬರಿಗೊಂಡು ಆಯತಪ್ಪಿ ಬೆಟ್ಟದ ಮೇಲಿನಿಂದ ಬಿದ್ದು ನವವಿವಾಹಿತೆ ಸಾವನ್ನಪ್ಪಿರುವ ಘೋರ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕಜುಗುಮಲೈನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ದಕ್ಷಿಣ ತಿಟ್ಟಂಕುಳಂ ನಿವಾಸಿ ಅನಿತಾ ಎಂದು ಗುರುತಿಸಲಾಗಿದೆ. ಕಳೆದ ತಿಂಗಳಷ್ಟೇ ವಿದೇಶದಲ್ಲಿ ಕೆಲಸ ಮಾಡುವ ಸುರೇಶ್ (29) ಅವರೊಂದಿಗೆ ವಿವಾಹವಾಗಿತ್ತು. ಸುರೇಶ್ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು. ದಂಪತಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕಜುಗುಮಲೈನ ಪ್ರಸಿದ್ಧ ಕಲುಗಸಲಮೂರ್ತಿ ದೇವಸ್ಥಾನಕ್ಕೆ ತೆರಳಿದ್ದರು.

ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ, ಇಬ್ಬರೂ ಬೆಟ್ಟದ ಮೇಲಿರುವ ಉಚಿಪಿಳ್ಳಯಾರ್ ದೇವಸ್ಥಾನಕ್ಕೆ ಹತ್ತಿದ್ದರು. ಈ ವೇಳೆ ಅಲ್ಲಿ ನವದಂಪತಿ ಕೋತಿಗಳಿಗೆ ಹಣ್ಣುಗಳನ್ನು ತಿನ್ನಿಸಲು ಮುಂದಾಗಿದ್ದಾರೆ. ಆದರೆ, ಹಣ್ಣುಗಳನ್ನು ನೋಡಿ ಹತ್ತಾರು ಕೋತಿಗಳು ಅನಿತಾ ಅವರನ್ನು ಸುತ್ತುವರೆದಿವೆ. ಇದರಿಂದ ತೀವ್ರ ಭಯಭೀತರಾದ ಅನಿತಾ, ಕೋತಿಗಳಿಂದ ತಪ್ಪಿಸಿಕೊಳ್ಳಲು ಹಿಂದೆ ಸರಿಯುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಟ್ಟದಿಂದ ಬಿದ್ದ ಅನಿತಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಣ್ಣೆದುರೇ ಪತ್ನಿ ಸಾವನ್ನಪ್ಪಿದ್ದನ್ನು ಕಂಡು ಪತಿ ಸುರೇಶ್ ಆಘಾತಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಕಜುಗುಮಲೈ ಅಗ್ನಿಶಾಮಕ ದಳ ಮತ್ತು ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular