ಬೆಂಗಳೂರು : ಯಾವುದೇ ಕಾರಣಕ್ಕೂ ‘ಯುವನಿಧಿ’ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪದವಿ ಪಡೆದು ನಿರುದ್ಯೋಗಿಗಳಾಗಿರುವ ಎಲ್ಲ ಯುವಕರಿಗೂ ಈ ಯೋಜನೆಯ ಲಾಭ ದೊರಕಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಯುವನಿಧಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಸಚಿವ ಶರಣಪ್ರಕಾಶ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.