ಚಲಿಸುವ ರೈಲಿನ ಕಿಟಕಿ ಹಿಡಿದು ನೇತಾಡಿದ ಕಳ್ಳ; ವಿಡಿಯೋ ವೈರಲ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ಓರ್ವ ವ್ಯಕ್ತಿ, ಚಲಿಸುತ್ತಿರುವ ರೈಲಿನ ಕಿಟಕಿ ಹಿಡಿದುಕೊಂಡು ಪ್ರಯಾಣಿಸುತ್ತಿರುವುದು ಕಂಡುಬಂದಿದೆ.

ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ travel_with_ahmad0 ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿಯ ಪ್ರಕಾರ, ಜನರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಈತ ಒಂದು ರೈಲಿನಿಂದ ಇನ್ನೊಂದು ರೈಲಿಗೆ ಜಿಗಿದಾಗ ಈ ರೀತಿಯಾಗಿ ಸಿಕ್ಕಿಬಿದ್ದಿದ್ದಾನೆ. ಅವನು ಈ ರೀತಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ನೇತಾಡುತ್ತಿದ್ದ ಎಂದು ಹೇಳಲಾಗಿದೆ.

ವಿಡಿಯೋದಲ್ಲಿ ಏನಿದೆ ?

ವಿಡಿಯೋದಲ್ಲಿ ಓರ್ವ ವ್ಯಕ್ತಿ ಚಲಿಸುತ್ತಿರುವ ರೈಲಿನ ಕಿಟಕಿಯ ಬಾರ್‌ ಹಿಡಿದುಕೊಂಡು ನೇತಾಡುತ್ತಿರುವುದು ಕಾಣಿಸುತ್ತದೆ. ಕಿಟಕಿಯ ಸೀಟಿನ ಮೇಲಿರುವ ಏನೋ ಒಂದು ವಸ್ತುವನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತದೆ. ರೈಲಿನ ಒಳಗಿರುವ ಪ್ರಯಾಣಿಕರು ಈ ವ್ಯಕ್ತಿಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾರೆ.

ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕರು ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ಕೆಲವರು ಈ ವ್ಯಕ್ತಿಯನ್ನು ಹುಚ್ಚ ಎಂದು ಕರೆದರೆ, ಇನ್ನು ಕೆಲವರು ಅವನನ್ನು ಹಾಸ್ಯ ಮಾಡಿದ್ದಾರೆ.

 

View this post on Instagram

 

A post shared by @travel_with_ahmad0

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read