ಕಾಯಂಗೆ ಒತ್ತಾಯಿಸಿ ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಎನ್.ಹೆಚ್.ಎಂ. ನೌಕರರ ವಿರುದ್ಧ ಎಸ್ಮಾ ಜಾರಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್(NHM) ಒಳಗುತ್ತಿಗೆ ನೌಕರರು ಪ್ರತಿಭಟನೆ ಕೈಗೊಂಡಿದ್ದು, ರಾಜ್ಯ ಸರ್ಕಾರ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ -ಎಸ್ಮಾ ಜಾರಿ ಮಾಡಿದೆ.

48 ಗಂಟೆಯೊಳಗೆ ಪ್ರತಿಭಟನೆ ಕೈ ಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಪ್ರತಿಭಟನೆ ಕೈಬಿಡದ ಹಿನ್ನೆಲೆಯಲ್ಲಿ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಒಂದು ತಿಂಗಳಿಂದ ಪ್ರತಿಭಟನೆ ಕೈಗೊಂಡಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ.

ಮಾರ್ಚ್ 16ರಂದು ಎಚ್ಚರಿಕೆ ನೀಡಿದ ನಂತರವೂ ಪ್ರತಿಭಟನೆ ಮುಂದುವರೆದ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಎನ್.ಹೆಚ್.ಎಂ. ಒಳಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕೆಂದು ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ತಿಂಗಳಿನಿಂದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read