ಈ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜ ಹಾರಿಸುವುದನ್ನು ತಡೆಯಲು ಬಹುಮಾನ ನೀಡುವುದಾಗಿ ಘೋಷಿಸಿದ್ದಕ್ಕಾಗಿ ಮತ್ತು “ಭಾರತದ ವಿರುದ್ಧ ಸಿಖ್ಖರಲ್ಲಿ ಅಸಮಾಧಾನ ಹರಡಿದ್ದಕ್ಕಾಗಿ” ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹೊಸ ಪ್ರಕರಣ ದಾಖಲಿಸಿದೆ.
NIA ಯ FIR ಪ್ರಕಾರ, ನಿಷೇಧಿತ “ಸಿಖ್ಸ್ ಫಾರ್ ಜಸ್ಟೀಸ್” (SFJ) ಸಂಘಟನೆಯ ಜನರಲ್ ಕೌನ್ಸೆಲ್ ಆಗಿರುವ ಪನ್ನುನ್, ಆಗಸ್ಟ್ 10 ರಂದು ಪಾಕಿಸ್ತಾನದ ಲಾಹೋರ್ ಪ್ರೆಸ್ ಕ್ಲಬ್ನಲ್ಲಿ ನಡೆದ “ಮೀಟ್ ದಿ ಪ್ರೆಸ್” ಕಾರ್ಯಕ್ರಮದ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾನೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
You Might Also Like
TAGGED:ಪನ್ನುನ್'