HomeIndiaBIG NEWS : ದಕ್ಷಿಣ ಕನ್ನಡ ಸೇರಿ ದೇಶದ 14 ಕಡೆ 'NIA' ದಾಳಿ, ಮಹತ್ವದ...

BIG NEWS : ದಕ್ಷಿಣ ಕನ್ನಡ ಸೇರಿ ದೇಶದ 14 ಕಡೆ ‘NIA’ ದಾಳಿ, ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆ ಹಿನ್ನಲೆ ದಾಳಿ ನಡೆಸಲಾಗಿದೆ. ಭಾರತದ 2047ರ ಒಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿದ್ದ ಶಂಕೆ ಹಿನ್ನಲೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 5 ರಾಜ್ಯಗಳ 14 ಸ್ಥಳಗಳಲ್ಲಿ NIA ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲಾತಿಗಳನ್ನ ವಶಪಡಿಸಿಕೊಂಡಿದೆ.

ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕೆಲ ಪಿಎಫ್ ಐ ಏಜೆಂಟರನ್ನು ಎನ್ಐಎ ಬಂಧಿಸಿತ್ತು. ಈ ನಿಟ್ಟಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular