HomeLatest NewsBIG NEWS: ಪಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಭದ್ರತಾ ಮಾಹಿತಿ ಹಂಚಿಕೆ: CRPF ಸಿಬ್ಬಂದಿ ಅರೆಸ್ಟ್

BIG NEWS: ಪಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಭದ್ರತಾ ಮಾಹಿತಿ ಹಂಚಿಕೆ: CRPF ಸಿಬ್ಬಂದಿ ಅರೆಸ್ಟ್

ನವದೆಹಲಿ: ಪಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಭದ್ರತಾ ಮಾಹಿತಿ ಹಂಚಿಕೊಂಡ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಸಿಆರ್ ಪಿಎಫ್ ಸಿಬ್ಬಂದಿಯೋರ್ವನನ್ನು ಬಂಧಿಸಿದೆ.

ಬಂಧಿತ ಆರೋಪಿಯನ್ನು ಮೋತಿ ರಾಮ್ ಎಂದು ಗುರುತಿಸಲಾಗಿದೆ. ಆರೋಪಿ ಬೇಹುಗಾರಿಕಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿದ್ದ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಸೂಕ್ಷ್ಮ ವಿಚಾರಗಳನ್ನು ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಹಂಚಿಕೊಳ್ಳುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಆರೋಪಿ ಮೋತಿ ರಾಮ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪಟಿಯಾಲಾ ಹೌಸ್ ಕ್ರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಮೋತಿ ರಾಮ್ ಗೆ ಜೂನ್ 6ವರೆಗೆ ಎನ್ ಐಎ ಕಸ್ಟಡಿಗೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular