HomeKarnatakaBIG NEWS: ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ; ಮತ್ತೊಂದು ಬಾಂಬ್ ಸಿಡಿಸಿದ HDK

BIG NEWS: ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ; ಮತ್ತೊಂದು ಬಾಂಬ್ ಸಿಡಿಸಿದ HDK

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ನೈಸ್ ಹಗರಣಗಳ ಬಗ್ಗೆ ಸರಣಿ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸಾಮಿ, ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ರೈತರ ಹೆಸರಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದೀರಿ. ಆ ಎಲ್ಲಾ ದಾಖಲೆಗಳ ಸಂಗ್ರಹ ಮಾಡಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಡುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಮಾಡುತ್ತೇನೆ. ನಾನು ದಾಖಲೆ ಕೊಡುತ್ತೇನೆ. ರೈತರಿಗೆ ನ್ಯಾಯ ಕೊಡಿಸಬೇಕಿದೆ ಎಂದು ಹೇಳಿದರು.

ಇನ್ನು ವರ್ಗಾವಣೆ ದಂಧೆಯಲ್ಲಿ ಒಂದು ಸಾವಿರ ಕೋಟಿಗಿಂತ ಅಧಿಕ ಹಣ ಸಂಗ್ರಹ ಮಾಡಿದ್ದಾರೆ. ಒಂದೊಂದು ಪೋಸ್ಟ್ ಗೆ 3-4 ಜನರಿಗೆ ಲೆಟರ್ ಕೊಟ್ಟಿದ್ದಾರೆ. ವರ್ಗಾವಣೆ ಬಗ್ಗೆ ಮಾತನಾಡು ಅಸಹ್ಯವಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular