ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ನಿಡಶೇಸಿ ಗ್ರಾಮದ ಶ್ರೀ ಗುರು ಚನ್ನಬಸವೇಶ್ವರ ಮಠದ ಚನ್ನಬಸವೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಅವರ ನಿಧನದಿಂದ ಭಕ್ತರು ಹಾಗೂ ಮಠದ ಅನುಯಾಯಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಇಂದು ವಿಧಿವಶರಾಗಿದ್ದಾರೆ. ಶ್ರೀಗಳ ಕ್ರಿಯಾ ಸಮಾಧಿ ಮಠದ ಆವರಣದಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಚನ್ನಬಸವೇಶ್ವರ ಸ್ವಾಮೀಜಿ ವೇದಮೂರ್ತಿ ಮಹಾಂತಯ್ಯ ಹಾಗೂ ನೀಲಮ್ಮ ದಂಪತಿ ಪುತ್ರರು.
ಸ್ವಾಮೀಜಿಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಠದ ಭಕ್ತರು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಭಕ್ತರು ಹಾಗೂ ಅನುಯಾಯಿಗಳು ಆಗಮಿಸುವ ನಿರೀಕ್ಷೆಯಿದೆ.
ಸ್ವಾಮೀಜಿಗಳ ನಿಧನಕ್ಕೆ ಭಕ್ತರು ಕಂಬನಿ ಮಿಡಿದಿದ್ದು, ಅವರ ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯನ್ನು ಸ್ಮರಿಸಿದ್ದಾರೆ.

