BIG NEWS: ನಿಗಮ ಮಂಡಳಿ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು. ನಿಗಮ ಮಂಡಳಿ ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದಾರೆ. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು. ಶಾಸಕರ ಸಂಖ್ಯೆ ಅಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದರು.

ಇದೇ ವೇಳೆ ಇನ್ಮುಂದೆ ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ, ಜನರ ಅಹವಾಲು ಅಲಿಸಲಿದೆ.ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು, ಅವರ ಒತ್ತಡ ಕಡಿಮೆ ಮಾಡುವ ಉದೇಶದಿಂದ ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read