HomeKarnatakaBIG NEWS: ನಿಗಮ ಮಂಡಳಿಯಲ್ಲಿ ಯಾರಿಗೆಲ್ಲ ಸ್ಥಾನ? ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ನಿಗಮ ಮಂಡಳಿಯಲ್ಲಿ ಯಾರಿಗೆಲ್ಲ ಸ್ಥಾನ? ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಫೈನಲ್ ಆಗಿದ್ದು ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಿಗಮ ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ ಎಂದು ತಿಳಿಸಿದರು.

ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕರಕ್ಕೆ ತಂದಿದ್ದಾರೆ. ಅವರ ಹಕ್ಕಿನಂತೆ ಈ ಅಧಿಕರ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು. ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆಅಲ್ಲಿ ನಾಳೆ ಸಂಜೆ 4:30ಕ್ಕೆ ಕಾಂಗ್ರೆಸ್ ಚುನವಣಾ ಸಮಿತಿ ಸಭೆ ನಡೆಯಲಿದೆ. ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular