BIG NEWS: ನಿಗಮ ಮಂಡಳಿ ಪಟ್ಟಿ ಫೈನಲ್; ಮೊದಲ ಬಾರಿ ಶಾಸಕರಾದವರಿಗಿಲ್ಲ ಸ್ಥಾನ; ಡಿಸಿಎಂ ಮಾಹಿತಿ

ಬೆಂಗಳೂರು: ನಿಗಮ ಮಂಡಳಿ ಪಟ್ಟಿ ಫೈನಲ್ ಆಗಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಬಾರಿಗೆ ಶಸಕರಾದವರಿಗೆ ಹಾಗೂ ವಿಧಾನಸಭೆ ಚುನವಣೆಯಲ್ಲಿ ಟಿಕೆಟ್ ಪಡೆದವರಿಗೆ ಸ್ಥಾನ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು, ಸುರ್ಜೇವಾಲಾ ಹಾಗೂ ನಾನು ಎಲ್ಲರೂ ಸೇರಿ ಚರ್ಚೆ ಮಾಡಿ ನಿಗಮ ಮಂಡಳಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲಾ ಹೈಕಮಾಂಡ್ ಬಳಿ ಪಟ್ಟಿ ತೆಗೆದುಕೊಂಡು ಹೋಗಿದ್ದಾರೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ನಿಗಮ ಮಂಡಳಿಯಲ್ಲಿ ನೂತನ ಶಾಸಕರಿಗೆ ಸ್ಥಾನ ಇಲ್ಲ. ಉಳಿದ ಶಾಸಕರಿಗೆ ಹಾಗೂ ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಸ್ಥಾನ ಕೊಡಲಾಗುತ್ತದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read