ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ; ಹಿರಿಯ ಶಾಸಕರು ಮಾತ್ರ ಪರಿಗಣನೆ; ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಳಿಸುವಾಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಮಾಡದಿರುವುದು ಸರಿಯಲ್ಲ. ಅವರು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದವರು, ಹಿರಿಯರು. ಅವರ ಅಭಿಪ್ರಾಯವನ್ನೂ ಕೇಳಬೇಕಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಿಗಮ ಮಂಡಳಿಗೆ ಕೇವಲ ಹಿರಿಯ ಶಾಸಕರನ್ನು ಮಾತ್ರ ಪರಿಗಣಿಸಲಾಗಿದೆ. ಹೊಸ ಶಾಸಕರಿಗೆ ಅವಕಾಶ ನೀಡಿಲ್ಲ. 3-4 ಬಾರಿ ಶಾಸಕರಾಗಿರುವ ಹಿರಿಯ ನಾಯಕರ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಭಾಗದ ಶಾಸಕರಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಭಾಗದ 2-3 ಶಾಸಕರಿಗೆ ಸ್ಥಾನ ಸಿಗಬಹುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read