ಅಬುಜಾ: ಕ್ಯಾಥೋಲಿಕ್ ಶಾಲೆಯೊಂದರ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದು, 200ಕ್ಕೂ ಹೆಚ್ಚು ಮಕ್ಕಳನ್ನು ಅಪಹರಿಸಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ.
ಸೇಂಟ್ ಮೇರಿ ಶಾಲೆಯ ಮೇಲೆ ದಾಳಿ ನಡೆಸಿರುವ ಬಂದೂಕುಧಾರಿಗಳು 215 ವಿದ್ಯಾರ್ಥಿಗಳು ಹಾಗೂ 12 ಶಿಕ್ಷಕರನ್ನು ತಮ್ಮ ವಶಕ್ಕೆ ಪಡೆದು ಅಪಹರಿಸಿದ್ದಾರೆ. ಈ ಬಗ್ಗೆ ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ತಿಳಿಸಿದೆ.
ಅಪಹರಣಕ್ಕೊಳಗಾಗಿರುವ ಮಕ್ಕಳು ಹಾಗೂ ಶಿಕ್ಷಕರನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಾವು ಸರ್ಕಾರ ಹಾಗೂ ಭದ್ರತಾ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಸ್ಥಳೀಯ ಆಡಳಿತದ ವಕ್ತಾರ ಡೇನಿಯಲ್ ಅಟೋರಿ ತಿಳಿಸಿದ್ದಾರೆ.
