
ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದನು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಬಂಧಿತನಿಂದ 5.15 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾತ್ರೆ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

