ಡಿಸಿಎಂ ಡಿಕೆಗೆ ಟಕ್ಕರ್: ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕೆ ನಿಖಿಲ್ ಕುಮಾರಸ್ವಾಮಿ

ರಾಮನಗರ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕಿಳಿಯಲಿದ್ದಾರೆ.

ಅವರು ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಚನ್ನಪಟ್ಟಣ ತಾಲೂಕಿನ 10 ಗ್ರಾಮಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಲಿದ್ದಾರೆ. ಕೆಂಗಲ್ ಆಂಜನೇಯ ಸ್ವಾಮಿ ದರ್ಶನದ ಬಳಿಕ ನಿಖಿಲ್ ಕುಮಾರಸ್ವಾಮಿ ಗ್ರಾಮಗಳಿಗೆ ತೆರಳಲಿದ್ದು, ಗ್ರಾಮಸ್ಥರು, ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಟಕ್ಕರ್ ಕೊಡಲು ಜೆಡಿಎಸ್ ಪ್ಲಾನ್ ಮಾಡಿಕೊಂಡಿದೆ. ಕ್ಷೇತ್ರ ಪ್ರವಾಸ ಮಾಡಿ ಪಕ್ಷ ಬಲವರ್ಧನೆಗೆ ಜೆಡಿಎಸ್ ಮುಂದಾಗಿದೆ. ಚನ್ನಪಟ್ಟಣಕ್ಕೆ 10ಕ್ಕೂ ಹೆಚ್ಚು ಬಾರಿ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೂ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ನಿಖಿಲ್ ಕುಮಾರಸ್ವಾಮಿ ಅವರ ಇಂದಿನ ಭೇಟಿ ಮಹತ್ವ ಪಡೆದುಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read