HomeKarnatakaBIG NEWS: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಾ ಮಾಜಿ ಸಿಎಂ ಪುತ್ರ? ಸ್ಪಷ್ಟನೆ ನೀಡಿದ ನಿಖಿಲ್...

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಾ ಮಾಜಿ ಸಿಎಂ ಪುತ್ರ? ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಾನು ಯೂಟರ್ನ್ ಹೊಡೆಯುವ ಗಿರಾಕಿ ಅಲ್ಲ, ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ ಎಂದು ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ವಿಚಾರವಾಗಿ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ನಿಖಿಲ್ ಕುಮಾರಸ್ವಾಮಿ, ಕಳೆದ ಮೂರ್ನಾಲ್ಕು ದಿನಗಳಿಂದ ಗಮನಿಸುತ್ತಿದ್ದೇನೆ. ನಾನು ಯೂಟರ್ನ್ ಹೊಡೆಯಲ್ಲ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ. ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ತಿಳಿಸಿದರು.

2019ರಲ್ಲಿ ಅಭ್ಯರ್ಥಿ ಆಗಿದ್ದೆ ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ, ಕಾರ್ಯಕರ್ತರ ಒತ್ತಾಯ ಇದೆ. ಆದರೆ ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು. ಬರಬೇಕು ಎಂದು ಮಂಡ್ಯದ ಮುಖಂಡರು ಕರೆದರು. ಈ ಕಾರಣಕ್ಕೆ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಲಪಡಿಸಬೇಕಿದೆ. ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು. ನನ್ನ ಗಮನ ರಾಜ್ಯದ 28 ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular