HomeKarnataka32 ಕ್ಷೇತ್ರಗಳ ಟಾರ್ಗೆಟ್: ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

32 ಕ್ಷೇತ್ರಗಳ ಟಾರ್ಗೆಟ್: ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. 32 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರ ಸಭೆ ಮಾಡುವ ಮೂಲಕ ನಿಖಿಲ್ ಕುಮಾರಸ್ವಾಮಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ 52 ಕ್ಷೇತ್ರಗಳಲ್ಲಿ ನಿಖಿಲ್ ಪ್ರವಾಸ ಮಾಡಿದ್ದರು.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕೀಯಕ್ಕೆ ಹೋದ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಕ್ಷ ಪ್ರಬಲವಾಗಿರುವ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗುತ್ತಿರುವ ಕಾರಣ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ ಪಕ್ಷಕ್ಕೆ ಅಗತ್ಯವಾಗಿದೆ. 2ನೇ ಹಂತದಲ್ಲಿ 32 ವಿಧಾನಸಭಾ ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರವಾಸ ಮಾಡಲಿದ್ದಾರೆ.

ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದ ತನಕ ಪಕ್ಷವನ್ನು ಸಂಘಟನೆ ಮಾಡುವುದು ನಿಖಿಲ್ ಕುಮಾರಸ್ವಾಮಿ ಯೋಜನೆಯಾಗಿದೆ. 2ನೇ ಹಂತದ ಪ್ರವಾಸವನ್ನು ಅವರು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಅವರ ಪಿರಿಯಾಪಟ್ಟಣದಿಂದ ಆರಂಭಿಸಿದ್ದು, ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸಲಿದ್ದಾರೆ.

ಫೆಬ್ರವರಿ 21 ತುಮಕೂರು ಗ್ರಾಮಾಂತರ, ಫೆಬ್ರವರಿ 22 ಕೆ.ಆರ್.ನಗರ, ಫೆಬ್ರವರಿ 24 ಟಿ.ನರಸೀಪುರ, ಫೆಬ್ರವರಿ 25ಕ್ಕೆ ಹುಣಸೂರು ಕ್ಷೇತ್ರದ ಪ್ರವಾಸವನ್ನು ನಿಖಿಲ್ ಕುಮಾರಸ್ವಾಮಿ ಮಾಡಲಿದ್ದಾರೆ. ಈ ಪ್ರವಾಸದಲ್ಲಿ ಕಾರ್ಯಕರ್ತರ ಸಭೆ, ಸದಸ್ಯತ್ವ ನೋಂದಣಿ ಅಭಿಯಾನಗಳು ಸೇರಿವೆ.

ಫೆಬ್ರವರಿ 27ಕ್ಕೆ ವಿಜಯಪುರದಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಿದೆ. ಅಷ್ಟರೊಳಗೆ ಉತ್ತರ ಕರ್ನಾಟಕ ಭಾಗದ 5 ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರವಾಸ ಮಾಡಲಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular