HomeLatest NewsBIG NEWS: ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆಯೇನು?

BIG NEWS: ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆಯೇನು?

ಚಿತ್ರದುರ್ಗ: ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಿವಾವಧಿ ಶಿಕ್ಷೆ ಪ್ರಕಟವಾಗಿರುವ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್ ನಲ್ಲಿ ಆದೇಶ ಪ್ರಕಟವಾಗಿದೆ. ಕೋರ್ಟ್ ತೀರ್ಪಿನ ಬಗ್ಗೆ ಯಾರೇ ಆದರೂ ತಲೆಬಾಗಲೇಬೇಕು. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆ ಅಗತ್ಯವಿಲ್ಲ ಎಂದಿದ್ದಾರೆ.

ಪ್ರಜ್ವಲ್ ಮೇಲೆ ಆರೋಪ ಬಂದಾಗಲೇ ಪಕ್ಷದಿಂದ ಅವರನ್ನು ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತ್ತಿನಲ್ಲಿಟ್ಟಿದ್ದರು. ಆಗ ಅಪರಾಧಿಯೋ ಅಲ್ಲವೋ ಎಂಬ ಬಗ್ಗೆ ಇನ್ನೂ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular