HomeKarnatakaBIG NEWS: 'ಬಂಡೆ’ಯಿಂದಲೇ ಸಿಎಂ ಸಿದ್ದರಾಮಯ್ಯನವರಿಗೆ ಸಮಸ್ಯೆ: ಡಿ.ಕೆ.ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

BIG NEWS: ‘ಬಂಡೆ’ಯಿಂದಲೇ ಸಿಎಂ ಸಿದ್ದರಾಮಯ್ಯನವರಿಗೆ ಸಮಸ್ಯೆ: ಡಿ.ಕೆ.ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಮೈಸೂರು: ‘ಈ ಬಂಡೆ ಸಿಎಂ ಸಿದ್ದರಾಮಯ್ಯನವರ ಜೊತೆಗಿದೆ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ನಾಯಕರು ವ್ಯಂಗ್ಯವಾಡಿದ್ದಾರೆ. ಡಿ.ಕೆ.ಶಿವಕುಮಾರ್ ಬಂಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ, ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಸಮಸ್ಯೆ ಇರುವುದು ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಿನ್ನೆ ಸಿದ್ದರಾಮಯ್ಯನವರ ಜೊತೆ ಈ ಬಂಡೆ ಇದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಆದರೆ ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಸಮಸ್ಯೆ. ‘ಬಂಡೆಯೇ ಸಿದ್ದರಾಮಯ್ಯನವರಿಗೆ ಪ್ರಾಬ್ಲಂ’ ಎಂದು ಟಾಂಗ್ ನೀಡಿದರು.

ಅದೇ ಬಂಡೆಯಿಂದ ತನಗೆ ಸಮಸ್ಯೆಯಾಗುತ್ತಿದೆ ಎಂಬುದು ಸ್ವತಃ ಸಿದ್ದರಾಮಣ್ಣನವರಿಗೂ ಗೊತ್ತು. ತನ್ನ ಜೊತೆಗಿರುವ ನಾಯಕರೇ ತನಗೆ ತೊಂದರೆ ಕೊಡುತ್ತಿದ್ದಾರೆ. ಯಾವ ಯಾವ ಕಾಂಗ್ರೆಸ್ ನಾಯಕರು ತನಗೆ ಸಮಸ್ಯೆಯಾಗಿದ್ದಾರೆ ಎಂಬುದು ಕೂಡ ಅವರಿಗೆ ತಿಳಿದಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ನಿನ್ನೆ ಮೈಸೂರಿನಲ್ಲಿ ನಡೆದಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನನ್ನು ಮಾಧ್ಯಮಗಳು ಬಂಡೆ ಎಂದು ಕರೆದಿವೆ. ಈ ಬಂಡೆ ಸಿದ್ದರಾಮಯ್ಯ ಅವರ ಜೊತೆಗಿದೆ. ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದ್ದರು. ಡಿಸಿಎಂ ಹೇಳಿಕೆಗೆ ಇದೀಗ ಜೆಡಿಎಸ್ ನಾಯಕರು ವ್ಯಂಗ್ಯವಾಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular