HomeKarnatakaBIG NEWS: ಅಭಿಮಾನಿ ಆತ್ಮಹತ್ಯೆ ಯತ್ನ: ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

BIG NEWS: ಅಭಿಮಾನಿ ಆತ್ಮಹತ್ಯೆ ಯತ್ನ: ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಮನನೊಂದ  ನಿಖಿಲ್ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅಭಿಮಾನಿ ಮನೆಗೆ ಭೇಟಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತಿದ್ದರಿಂದ ಅವರ ಅಭಿಮಾನಿ ಮಂಜುನಾಥ್ ಎಂಬುವವರು ತೀವ್ರವಾಗಿ ನೊಂದಿದ್ದರು. ಇದೇ ದುಃಖದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಡ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಮನೆಗೆ ಭೇಟಿ ನೀಡಿರುವ ನಿಖಿಲ್ ಕುಮರಸ್ವಾಮಿ, ಮಂಜುನಾಥ್ ಆರೋಗ್ಯ ವಿಚಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular