ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆ: ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ 39 ವರ್ಷದ ವ್ಯಕ್ತಿಗೆ ಚಿಕಿತ್ಸೆ

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಮತ್ತೆ ಏರಿಕೆ ಕಂಡಿದೆ. ಎಲ್ಲಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸರ್ಕಾರ ಪ್ರಯತ್ನ ಹೆಚ್ಚಿಸುತ್ತಿದ್ದಂತೆ, 39 ವರ್ಷದ ವ್ಯಕ್ತಿಯೊಬ್ಬರು ಏಕಾಏಕಿ ಕೇರಳದ ಆರನೇ ನಿಪಾ ವೈರಸ್ ಪ್ರಕರಣವಾಗಿದ್ದಾರೆ. ಈ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಡಾ. ಭಾರತಿ ಪ್ರವೀಣ್ ಪವಾರ್ ಅವರು ಕೇರಳದ ಕೋಝಿಕ್ಕೋಡ್‌ನಲ್ಲಿ ನಿಪಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದ್ದಾರೆ.

ಪುಣೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ- ರಾಷ್ಟ್ರೀಯ ವೈರಾಲಜಿ ಸಂಸ್ಥೆ(ಐಸಿಎಂಆರ್-ಎನ್‌ಐವಿ)ಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಭಾರತ ಸರ್ಕಾರವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಹರಡುವಿಕೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರದ ಉನ್ನತ ಮಟ್ಟದ ತಂಡಗಳು ಮತ್ತು BSL-3 ಪ್ರಯೋಗಾಲಯಗಳನ್ನು ಹೊಂದಿರುವ ಮೊಬೈಲ್ ಘಟಕಗಳೊಂದಿಗೆ ICMR-NIV ಈಗಾಗಲೇ ಕೋಝಿಕ್ಕೋಡ್‌ಗೆ ತಲುಪಿದೆ. ಕೋಝಿಕ್ಕೋಡ್ ಪ್ರದೇಶದಲ್ಲಿ ಪೀಡಿತ ಗ್ರಾಮ ಪಂಚಾಯಿತಿಗಳನ್ನು ಕ್ವಾರಂಟೈನ್ ವಲಯಗಳಾಗಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

https://twitter.com/ANI/status/1702517957115761000

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read