HomeIndiaನಿಫಾ ವೈರಸ್: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಕೇಸ್

ನಿಫಾ ವೈರಸ್: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಕೇಸ್

ಕೋಝಿಕೋಡ್: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೊಯಿಲಾಂಡಿ ನಿವಾಸಿ ಅನಿಲ್ ಕುಮಾರ್ ಎಂಬ ಪತ್ರಿಕೆ ಏಜೆಂಟ್ ವಿರುದ್ಧ ನಿನ್ನೆ ರಾತ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ನಿಫಾಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ್ದರು. ನಿಫಾ ಫಾರ್ಮಾ ಕಂಪನಿಗಳು ಸೃಷ್ಟಿಸಿದ ನಕಲಿ ಸೃಷ್ಟಿ ಎಂದು ಪೋಸ್ಟ್‌ ಹಾಕಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಮತ್ತು ಜನರು ದೂರು ನೀಡಲು ಪ್ರಾರಂಭಿಸಿದಾಗ ಅವರು ಅದನ್ನು ಅಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಮತ್ತು ಕೇರಳ ಪೊಲೀಸ್ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಠಾಣೆಗೆ ಕರೆಸಿಕೊಂಡು ನೋಟಿಸ್ ನೀಡಿ ಬಿಡುಗಡೆಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ನಿಫಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸದಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದರು. ಹೀಗಿದ್ದರೂ ಸುಳ್ಳು ಸುದ್ದಿ ಹರಡಿದ ಹಿನ್ನಲೆಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular