HomeKarnatakaನಿಪ್ಪಾಣಿ ತಹಶಿಲ್ದಾರ್ ಮನೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ನಿಪ್ಪಾಣಿ ತಹಶಿಲ್ದಾರ್ ಮನೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ನಿಪ್ಪಾಣಿ ತಹಶೀಲ್ದಾರ್ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಿಪ್ಪಾಣಿ ತಹಶೀಲ್ದಾರ್ ಸುರೇಶ್ ಮುಂಜೆಗೆ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಸುರೇಶ್ ಅವರ ನಿಪ್ಪಾಣಿ ಪಟ್ಟಣದ ಮನೆ, ಅಥಣಿ ಪಟ್ಟಣದ ಮನೆ ಹಾಗೂ ಮೂಡಲಗಿ ಪಟ್ಟಣದಲ್ಲಿರುವ ಅವರ ಮಾವನ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಹಶೀಲ್ದಾರ್ ಸುರೇಶ್ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ವಿವಿಧೆಡೆ ಇರುವ ಅವರ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಬಸವನ ಬಾಗೇವಾಡಿಯಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲು

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಭೂಕಂಪ ಸಂಭವಿಸಿದ್ದು, ಜನರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 3.5ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಈ ಬಗ್ಗೆ ಮಾಹಿತಿ ನೀಡಿದೆ.

ಇಂದು ಬೆಳಗಿನ ಜಾವ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸುತ್ತಮುತ್ತಿಲಿನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ಭೂಮಿ ನಡುಗಿದ ಅನುಭವವಾಗಿದೆ. ನಸುಕಿನ ಜಾವ 2:04ರ ಸುಮಾರಿಗೆ ಭೂಕಂಪನ ಸಂಭವಿಸಿದೆ.

ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ ನೀಡಿದೆ. ಕೆಲ ದಿಬಗಳ ಹಿಂದೆ ಕೂಡ ವಿಜಯಪುರದ ವಿವಿಧೆಡೆ ಭೂಕಂಪ ಸಂಭವಿಸಿತ್ತು. ಇದೀಗ ಮತ್ತೆ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular