HomeKarnatakaBIG NEWS: ನಿಫಾ ವೈರಸ್ ಭೀತಿ: ಮೈಸೂರಿನಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

BIG NEWS: ನಿಫಾ ವೈರಸ್ ಭೀತಿ: ಮೈಸೂರಿನಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಮೈಸೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದ್ದು, ಇದೀಗ ಮೈಸೂರು ಜಿಲ್ಲೆಯಲ್ಲಿಯೂ ನಿಫಾ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರ ಮೇಲೆ ಪೊಲೀಸರು ನಿಗಾ ಇರಿಸಿದ್ದು, ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಗಡಿ ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

ಪ್ರತಿವಾಹನದ ವಿವರ ಪಡೆದುಕೊಂಡು ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುತ್ತಿದೆ. ಅಲ್ಲದೇ ನಿಫಾ ವೈರಸ್ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular