ಸತತ ಆರನೇ ಬಾರಿಗೆ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್ ದಾಖಲೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಮಧ್ಯಂತರ ಮುಂಗಡ ಪತ್ರ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತ ಆರನೇ ಬಾರಿಗೆ ಬಜೆಟ್ ಮಂಡನೆಯ ದಾಖಲೆ ಬರೆಯಲಿದ್ದಾರೆ.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಸೇರಿದಂತೆ ಹಲವರ ದಾಖಲೆಯನ್ನು ನಿರ್ಮಲಾ ಸೀತಾರಾಮನ್ ಹಿಂದಿಕ್ಕಲಿದ್ದಾರೆ. ಕೇಂದ್ರ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ. ಚಿದಂಬರಂ, ಯಶವಂತ್ ಸಿನ್ಹಾ ಅವರು ಸತತ 5 ಬಜೆಟ್ ಗಳನ್ನು ಮಂಡಿಸಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಹಣಕಾಸು ಸಚಿವರಾಗಿದ್ದ 1959 -64ರ ನಡುವೆ 5 ವಾರ್ಷಿಕ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು 2024- 25 ನೇ ಸಾಲಿನ ಮಧ್ಯಂತರ ಮುಂಗಡ ಪತ್ರ ಮಂಡಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read