HomeAgricultureಕಾಫಿ ಬೆಳೆಗಾರರಿಗೆ ಬಿಗ್ ರಿಲೀಫ್‌ ಕೊಟ್ಟ ಕೇಂದ್ರ ಸರ್ಕಾರ

ಕಾಫಿ ಬೆಳೆಗಾರರಿಗೆ ಬಿಗ್ ರಿಲೀಫ್‌ ಕೊಟ್ಟ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಕರ್ನಾಟಕದ ಕಾಫಿ ಬೆಳೆಗಾರರಿಗೆ ಬಿಗ್ ರಿಲೀಫ್‌ ನೀಡಿದೆ. ಈ ಕುರಿತು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್  ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕರ್ನಾಟಕದ ವಿವಿಧ ಸಂಸದರು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಕಾಫಿ ಬೆಳೆಗಾರರ ಸಮಸ್ಯೆ ಕುರಿತು ವಿವರಣೆ ನೀಡಿದ್ದರು. ಕಾಫಿ ಬೆಳೆ ಆನ್‌ಲೈನ್ ಏಲಂ (e-Auction) ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದನೆ ಸಿಕ್ಕಿದೆ. ಕಾಫಿ ಬೆಳೆ ಆನ್‌ಲೈನ್ ಏಲಂ ರದ್ದುಗೊಳಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಸಾಮಾಜಿಜ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಸಮಕ್ಷಮ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ರವರನ್ನು ಪಾರ್ಲಿಮೆಂಟಿನಲ್ಲಿ ಭೇಟಿಯಾಗಿ ಕಾಫಿ ಬೆಳೆಗಾರರನ್ನು ಕಾಡುತ್ತಿರುವ ಸರ್ಪೇಸ್ ಕಾಯಿದೆ ಬಗ್ಗೆ ವಿವರಿಸಿ ಕಾಫಿ ಬೆಳೆಗಾರರ ಸಮಸ್ಯೆಯನ್ನು ಕೆಲ ಮಧ್ಯವರ್ತಿಗಳು ದುರುಪಯೋಗಪಡಿಸಿಕೊಂಡು ವಿದೇಶಗಳಲ್ಲಿ ಆನ್ ಲೈನ್ ಮೂಲಕ ಖರೀದಿಸಿ ಬಡ ರೈತರ ಭೂಮಿಯನ್ನು ಕಬಳಿಸುತ್ತಿದ್ದಾರೆ. ಇದಕ್ಕೆ ಕೆಲವಡೆ ಬ್ಯಾಂಕ್ ಅಧಿಕಾರಿಗಳ ಸಹಮತವೂ ಇದೆ ಎಂಬ ದೂರುಗಳಿವೆ ಎಂದು ವಿವರಿಸಲಾಗಿತ್ತು.

ಕಾಫಿ ಬೆಳೆಗಾರರಲ್ಲಿ ಶೇಕಡ 90 ಕ್ಕೂ ಮಿಕ್ಕಿ ರೈತರು ಸಣ್ಣ ಹಿಡುವಳಿದಾರರಾಗಿದ್ದು, ಬಹುತೇಕ ಮಂದಿಗೆ ತಮ್ಮ ಭೂಮಿ ಸದ್ರಿ ಕಾಯಿದೆಯಿಂದ ಆನ್ ಲೈನ್ ಮೂಲಕ ಹರಾಜಾಗುತ್ತಿರುವುದು ಅರಿವಿಗೆ ಬರುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಸರ್ಪೇಸ್ ಕಾಯಿದೆ ವಿರಹಿತಗೊಳಿಸಬೇಕು ಮತ್ತು ಆನ್ ಲೈನ್ ಮೂಲಕ ಕಾಫಿ ಬೆಳೆಗಳನ್ನು ಹರಾಜು ಹಾಕುವುದನ್ನು ತಡಗಟ್ಟಬೇಕೆಂದು ಮನವಿ ಮಾಡಿದೆವು ಎಂದು ಸಂಸದರು ಹೇಳಿದ್ದಾರೆ.

ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ದೇವೆಗೌಡರ ಸಮಕ್ಷಮ ನಡೆದ ಚರ್ಚೆಯ ನಂತರ ಸಚಿವೆ ನಿರ್ಮಲಾ ಸೀತಾರಾಮನ್ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡುವುದಾಗಿ ಮತ್ತು ತುರ್ತಾಗಿ ಕಾಫಿ ಬೆಳೆ ಸಾಲಗಾರರ ತೋಟವನ್ನು ಆನ್ ಲೈನ್ ಹರಾಜು ನಿಲ್ಲಿಸಲು ಆದೇಶ ನೀಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಸಂಸದರು ಪೋಸ್ಟ್ ಹಾಕಿದ್ದಾರೆ.

ನಿಯೋಗದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಶ್ರೀ ಡಾ ಮಂಜುನಾಥ್, ಶ್ರೀ ಮಲ್ಲೇಶ್ ಮುಂತಾದವರಿದ್ದರು. ತಮ್ಮ ನಿಯೋಗದ ಭೇಟಿ ಸಂದರ್ಭ ಉಪಸ್ಥಿತರಿದ್ದು, ಮಾರ್ಗದರ್ಶನ ಮಾಡಿದ ಮಾಜಿ ಪ್ರಧಾನ ಮಂತ್ರಿಗಳಾದ ದೇವೇಗೌಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಸಂಸದರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular