ಎಂಸಿ ಚನ್ನಕೇಶವ ನಿರ್ದೇಶನದ ನಿಶಾ ರವಿಕೃಷ್ಣನ್ ಅಭಿನಯದ ಬಹು ನಿರೀಕ್ಷಿತ ‘ಅಂಶು’ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮಹಿಳಾ ಪ್ರಧಾನ ಕಥಾ ಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ತನ್ನ ಟ್ರೈಲರ್ ನಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದು, ಪ್ರೇಕ್ಷಕರು ತೆರೆ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಈ ಚಿತ್ರವನ್ನು ಗ್ರಹಣ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಸಂಸ್ಥೆ ನಿರ್ಮಾಣ ಮಾಡಿದ್ದು, ಕೆಸಿ ಬಾಲ ಸಾರಂಗನ್ ಸಂಗೀತ ಸಂಯೋಜನೆ ನೀಡಿದ್ದು, ನಿರ್ದೇಶಕ ಎಂ ಸಿ ಚನ್ನಕೇಶವ ಹಾಗೂ ರಿಕ್ಕಿ ಮಾರ್ಟ್ ಅವರ ಸಂಕಲನ, ಮಹೇಂದ್ರ ಗೌಡ ಸಂಭಾಷಣೆ, ಸುನೀಲ್ ನರಸಿಂಹಮೂರ್ತಿ ಛಾಯಾಗ್ರಹಣವಿದೆ.