ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಹೇಳಿಕೆಗೆ ನಿರ್ಬಂಧ: ಹೈಕೋರ್ಟ್ ಆದೇಶ

ಬೆಂಗಳೂರು: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧಿಸಿದೆ.

ಸಿ.ಪಿ. ಯೋಗೇಶ್ವರ್ ಪತ್ನಿ ಪಿ.ವಿ. ಶೀಲಾ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಸೋಮವಾರ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕ ಸದಸ್ಯ ಪೀಠದಲ್ಲಿ ನಡೆದಿದ್ದು, ಮಧ್ಯಂತರ ಆದೇಶ ಹೊರಡಿಸಲಾಗಿದೆ.

ಪತಿ ಸಿ.ಪಿ. ಯೋಗೇಶ್ವರ್ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಮ್ಮ ಮಲ ಮಗಳಾದ ನಿಶಾ ಯೋಗೇಶ್ವರ್ ಜಾಲತಾಣಗಳಲ್ಲಿ ಕುಟುಂಬದ ವಿರುದ್ಧ ಮಾನಹಾನಿಕರ, ಆಧಾರರಹಿತ, ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ. ಬೆಂಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಎಂದು ಪಿ.ವಿ. ಶೀಲಾ ತಿಳಿಸಿದ್ದಾರೆ.

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್ ಈ ಕುರಿತಾಗಿ ಪ್ರತಿವಾದಿಗಳಾದ ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಜಾಲತಾಣಗಳಲ್ಲಿ ನಿಶಾ ಯೋಗೇಶ್ವರ್ ಅವರ ನಿಂದನಾತ್ಮಕ ಹೇಳಿಕೆಗಳನ್ನು ಅಪ್ಲೋಡ್ ಮಾಡದತೆ ತಿಳಿಸಿದೆ. ಈಗಾಗಲೇ ಪ್ರಸಾರ ಮಾಡಿರುವ ತುಣುಕುಗಳನ್ನು ತಡೆಹಿಡಿಯಬೇಕು ಎಂದು ಮಧ್ಯಂತರ ಆದೇಶ ನೀಡಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read