‘ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ’ : ನಿತಿನ್ ಗಡ್ಕರಿ ಖಡಕ್ ಉತ್ತರ

ನವದೆಹಲಿ: ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಖಡಕ್ ಉತ್ತರ ನೀಡಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಭಂಡಾರದಲ್ಲಿ ಶುಕ್ರವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಹಿಂದೆ ಕಾಂಗ್ರೆಸ್ ನೀಡಿದ್ದ ಆಫರ್ ಗೆ ಈ ರೀತಿ ಉತ್ತರ ನೀಡಿದ್ದಾರೆ. ಒಮ್ಮೆ ರಾಜಕಾರಣಿಯೊಬ್ಬರು ಕಾಂಗ್ರೆಸ್ ಸೇರಲು ಸಲಹೆ ನೀಡಿದ್ದರು, ಅದಕ್ಕೆ ಅವರು ಆ ಪಕ್ಷದ ಸದಸ್ಯರಾಗುವುದಕ್ಕಿಂತ ಬಾವಿಗೆ ಹಾರಿ ಸಾಯುವುದು ಉತ್ತಮ ಎಂದು ಉತ್ತರಿಸಿದ್ದಾರೆ.

60 ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್ ಮಾಡಿದ್ದಕ್ಕೆ ಹೋಲಿಸಿದರೆ ಕಳೆದ ಒಂಬತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ದೇಶದಲ್ಲಿ ದುಪ್ಪಟ್ಟು ಕೆಲಸಗಳನ್ನು ಮಾಡಿದೆ ಎಂದು ಸಚಿವರು ಹೇಳಿದ್ದಾರೆ.ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಭಂಡಾರದಲ್ಲಿ ಶುಕ್ರವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಬಿಜೆಪಿಗಾಗಿ ಕೆಲಸ ಮಾಡಿದ ಆರಂಭಿಕ ದಿನಗಳನ್ನು ನೆನಪಿಸಿಕೊಂಡರು ಮತ್ತು ಪಕ್ಷದ ಪ್ರಯಾಣದ ಬಗ್ಗೆ ಮಾತನಾಡಿದರು. ಇದೇ ವೇಳೆ ತಮ್ಮ ಯೌವ್ವನದ ದಿನಗಳಲ್ಲಿ ತಮ್ಮಲ್ಲಿ ಮೌಲ್ಯಗಳನ್ನು ಹುಟ್ಟುಹಾಕಿದ್ದಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಶ್ಲಾಘಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read